
ಮಂಗಳೂರು : ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಅತ್ತಾವರದಲ್ಲಿ ನಡೆದಿದೆ. ಐದು ದಿನಗಳ ಹಿಂದೆ ಪ್ರಿಯಕರನ ಜೊತೆ ಬಂದಿದ್ದ ವಿದ್ಯಾರ್ಥಿನಿ ದಂಪತಿ ಸೋಗಿನಲ್ಲಿ ಕೊಠಡಿ ಬಾಡಿಗೆ ಪಡೆದಿದ್ದರು. ಇದೀಗ ಬಾಡಿಗೆ ಕೊಠಡಿಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ನಡೆದಿರುವುದಾಗಿ ಶಂಕಿಸಲಾಗಿದೆ. ಕುತ್ತಿಗೆ ಭಾಗದಲ್ಲಿ ಕುರುಹುಗಳು ಪತ್ತೆಯಾಗಿದೆ. ಅಂಜಲಿಗೆ ಜೂನ್ 26ರಂದು ಬೇರೆ ಯುವಕನ ಜೊತೆ ಮದುವೆ ನಿಗದಿಯಾಗಿತ್ತು, ಈ ಹಿನ್ನಲೆಯಲ್ಲಿ ಪ್ರಿಯಕರ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಮೃತ ಅಂಜನಾ ಉಜಿರೆ ಎಸ್‍ಡಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಅಂಜನಾ ವಷಿಷ್ಠ(22) ಎಂದು ಆಕೆಯ ಆಧಾರ್ ಕಾರ್ಡ್ ಆಧಾರದಲ್ಲಿ ಪೊಲೀಸರು ಗುರುತು ಪತ್ತೆಹಚ್ಚಿದ್ದಾರೆ. ಇನ್ನು ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









