
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಎದುರು ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿಗೆ ದೇವೇಗೌಡರು ಹೊಸ ಜವಾಬ್ದಾರಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಸಧ್ಯಕ್ಕೆ ಜೆಡಿಎಸ್ ಪಕ್ಷದೊಳಗೆ ಯಾವುದೇ ಹುದ್ದೆ ಖಾಲಿ ಇಲ್ಲ, ಹಾಗಾದರೆ ಈ ಹೊಸ ಜವಾಬ್ದಾರಿ ಯಾವುದು. ಮಂಡ್ಯದಲ್ಲಿ ಸೋತ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಯುವ ಘಟಕದ ಜವಾಬ್ದಾರಿ ನೀಡುತ್ತಾರಾ ಎಂಬ ಪ್ರಶ್ನೆ ಕಾಡುತ್ತಿದೆ. ಜೆಡಿಎಸ್ ಕಾರ್ಯಕರ್ತರನ್ನು ಪಕ್ಷ ಅವಲಂಬಿಸಿದೆ. ಆದರೆ ರಾಜಕೀಯವಾಗಿ ಸರಿಯಾದ ತಂತ್ರ ಹೆಣೆಯುತ್ತಿಲ್ಲ. ವಿಜಯಪುರ, ಕಲಬುರಗಿ, ರಾಯಚೂರು, ಚಿತ್ರದುರ್ಗದಲ್ಲಿ ಪಕ್ಷಕ್ಕೆ ಬೆಳೆಯುವ ಅವಕಾಶವಿದೆ ಎಂದು ನಿಖಿಲ್ ಹೇಳಿದ್ದಾರೆ.
ಇತ್ತೀಚೆಗೆ ಗೌಡರ ಸಮ್ಮುಖದಲ್ಲಿ ಜೆಡಿಎಸ್ ಶಾಸಕರ ಸಭೆ ನಡೆಯಿತು. ಹಾಗಾಗಿ ಪಕ್ಷ ಬಲವರ್ಧನೆಗಾಗಿ ಹೊಸ ತಂತ್ರಗಾರರನ್ನು ಕರೆದುಕೊಂಡು ಬರಲಾಗುತ್ತದೆ. ಈ ವೇಳೆ ಕೆಲ ಶಾಸಕರು ನಿಖಿಲ್ ಪರ ವಾದ ಮಾಡಿದರೆ, ಮತ್ತೆ ಕೆಲವರು ಪ್ರಜ್ವಲ್ ಪರ ವಾದ ಮಾಡಿದ್ದಾರೆ.
ಆದರೆ ಅಂತಿಮ ನಿರ್ಧಾರವನ್ನು ವರಿಷ್ಠರೇ ಕೈಗೊಳ್ಳಬೇಕು ಎಂದು ನಿಖಿಲ್ ಹೇಳಿದ್ದಾರೆ. ಹಾಗಾದರೆ ನಿಖಿಲ್‍ಗೆ ಹೊಸ ಜವಾಬ್ದಾರಿಯನ್ನು ಗೌಡರು ನೀಡಲಿದ್ದಾರಾ ಎಂದು ಕಾದು ನೋಡಬೇಕಿದೆ.








