Wednesday, March 18, 2026
ಸುದ್ದಿ

ಎಕ್ಸಲೆಂಟ್ ಮೂಡಬಿದಿರೆ: ಮಾದಕ ದ್ರವ್ಯ ವಿರೋಧಿ ದಿನಾಚರಣೆ – ಕಹಳೆ ನ್ಯೂಸ್

ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಮತ್ತು ಆಂಗ್ಲಮಾಧ್ಯಮ ಶಾಲೆಯಲ್ಲಿ ಮಂಗಳೂರು ನಗರ ಪೊಲೀಸ್, ಮೂಡಬಿದಿರೆ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ದ್ರವ್ಯಗಳ ವಿರೋಧಿ ದಿನಾಚರಣೆಯನ್ನು ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡಬಿದಿರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಶ್ರೀ ದೇಜಪ್ಪ ಇವರು ವಿದ್ಯಾರ್ಥಿ ಜೀವನದಲ್ಲಿ ತಾವು ತೆಗೆದುಕೊಳ್ಳುವ ನಿರ್ಧಾರಗಳು ತಮಗೆ ಮತ್ತು ಸಮಾಜಕ್ಕೆ ಮಾರಕವಾಗಿರದೆ, ವಿದ್ಯಾರ್ಜನೆಯೊಂದಿಗೆ ತಾವು ಈ ಸಮಾಜಕ್ಕೆ ಉತ್ತಮ ಕೊಡುಗೆಗಳಾಗಿರಬೇಕೆಂದು ಕರೆ ನೀಡಿದರು. ಮಾದಕ ದ್ರವ್ಯಗಳಿಂದ ಸಿಗುವ ಕ್ಷಣಿಕ ಸುಖಗೋಸ್ಕರ ತಮ್ಮ ಅತ್ಯುತ್ತಮ ಜೀವನವನ್ನು ಹಾಳುಮಾಡಿಕೊಳ್ಳದೆ, ಶಿಸ್ತುಬದ್ದ ಆರೋಗ್ಯದಾಯಕ ಜೀವನವನ್ನು ನಡೆಸಬೇಕೆಂದು ತಿಳಿಸಿದರು.

ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮೂಡಬಿದಿರೆಯ ಪೊಲೀಸ್ ಠಾಣೆಯ ಸಿಬ್ಬಂದಿಗಳು, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಾಜೇಶ್ ಲೊಬೊ, ಶಾಲಾ ಮತ್ತು ಕಾಲೇಜಿನ ಸಿಬ್ಬಂದಿವರ್ಗ ಮತ್ತು ವಿಧ್ಯಾರ್ಥಿಗಳು ಭಾಗವಹಿಸಿದ್ದರು ಮುಖ್ಯೋಪಾದ್ಯಾಯರಾದ ಶ್ರೀ ಗುರುಪ್ರಸಾದ್ ಶೆಟ್ಟಿಯವರು ಸ್ವಾಗತಿಸಿ, ಕಾಲೇಜು ಪ್ರಾಂಶುಪಾಲರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿಯವರು ವಂದಿಸಿದರು.