Wednesday, March 18, 2026
ಸುದ್ದಿ

ಕರಾವಳಿಯ ಹಲವು ದೇಗುಲಗಳ ದರ್ಶನ ಪಡೆದ ‘ಚಾಲೆಂಜಿಂಗ್ ಸ್ಟಾರ್’ – ಕಹಳೆ ನ್ಯೂಸ್

ಪುತ್ತೂರು: ಸ್ಯಾಂಡಲ್‍ವುಡ್‍ನ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಜೂ.27 ರಂದು ಕರಾವಳಿಗೆ ಭೇಟಿ ನೀಡಿದ್ದಾರೆ. ರಾತ್ರಿ ಪುತ್ತೂರಿನಲ್ಲಿ ಉದ್ಯಮಿಯೊಬ್ಬರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದರ್ಶನ್ ಭಾಗವಹಿಸಿದ್ದರು. ಜೂ 28ರಂದು ಮುಂಜಾನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ದರ್ಶನ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇಂದು ಮುಂಜಾನೆ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಿಂಗೇಶ್ವರನಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಅವರು ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಗಣಪತಿಯ ದರ್ಶನ ಪಡೆದರು. ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದರ್ಶನ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಸುಬ್ರಹ್ಮಣ್ಯ ದೇವರ ಅನುಗ್ರಹ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು