
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದಾರೆ. ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ಕೂಡ ನೀಡಿದ್ದಾರೆ. ಲೋಕಸಭೆಯ ಚುನಾವಣೆಯಲ್ಲಿ ಪಕ್ಷ ಜಯಗಳಿಸಿದ ನಂತರ ತಮ್ಮ ಕ್ಷೇತ್ರಕ್ಕೆ ಅವರು ಎರಡನೆಯ ಬಾರಿ ಭೇಟಿ ನೀಡುತ್ತಿದ್ದಾರೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಬಿಜೆಪಿಯ ಸದಸ್ಯತ್ವ ನೋಂದಣಿ ಆರಂಭವಾಗಲಿದ್ದು, ಈ ಕಾರ್ಯಕ್ರಮವನ್ನು ನಾನೂ ಕಾಶಿಯಿಂದ ಆರಂಭಿಸುತ್ತೇನೆ. ಇದು ಅಭಿಯಾನವು ಜನರನ್ನು ಎಲ್ಲ ಸಂದರ್ಭದಲ್ಲಿಯೂ ಬಿಜೆಪಿ ಕುಟುಂಬದೊಂದಿಗೆ ಸಂಪರ್ಕಿಸುತ್ತದೆ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ವಾರಣಾಸಿಗೆ ಬೆಳಿಗ್ಗೆ 10 ಗಂಟೆಗೆ ಬರಲಿರುವ ಮೋದಿ ಅವರು, ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲ ರಾಮ್ ನಾಯ್ಕ್, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವ ಮಹೇಂದ್ರ ನಾಥ್ ಪಾಂಡೆ ಅವರನ್ನು ಸ್ವಾಗತ ಮಾಡಿದ್ದಾರೆ.









