Tuesday, April 28, 2026
ಸುದ್ದಿ

Breaking News : ಪುತ್ತೂರಿನ ಗ್ಯಾಂಗ್ ರೇಪ್ ವೀಡಿಯೋ ವೈರಲ್ ಪ್ರಕರಣ ; ಆರೋಪಿಗಳಿಗೆ ಜಾಮೀನು – ಕಹಳೆ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆಯ ಅಶ್ಲೀಲ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸರು ಕಬಕ ನಿವಾಸಿ ಚಂದ್ರಶೇಖರ ಮಯ್ಯ, ಮುರಳೀ ಪರ್ಲಡ್ಕ, ಪವನ್ ಕರ್ಲ್ಲರ್ಪೆ, ದೈಹಿಕ ಶಿಕ್ಷಣ ಶಿಕ್ಷಕ ಪೂವಪ್ಪ ಮತ್ತು ಶ್ರೇಯಾ ಎಂಬವರನ್ನು ಐಟಿ ಕಾಯ್ದೆಯಡಿ ಬಂಧಿಸಿ, ಪ್ರಕರಣ ದಾಖಲಿಸಿದ್ದರು.

ಆರೋಪಿಗಳನ್ನು ಪುತ್ತೂರು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯಕ್ಕೆ ಗುರುವಾರ ಸಂಜೆ ಹಾಜರುಪಡಿಸಿದಾಗ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶಿಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಒಂದು ದಿನದ ನ್ಯಾಯಾಂಗ ಬಂಧನಕ್ಕೆ ನೀಡಿದ ಆರೋಪಿಗಳನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪುತ್ತೂರು ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. ಗುರುವಾರ ಸಹಾಯಕ ಸರಕಾರಿ ಅಭಿಯೋಜಕರು ಇಲ್ಲದ ಕಾರಣ ಮತ್ತು ಆರೋಪಿತರ ಜಾಮೀನು ಅರ್ಜಿಯ ವಿಚಾರಣೆಗೆ ಅಭಿಯೋಜಕರ ಆಕ್ಷೇಪಣೆ ಅಥವಾ ವಾದ ಮಂಡನೆ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು.

ಇಂದು ನ್ಯಾಯಾಲಯ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ನ್ಯಾಯವಾದಿ ಮಹೇಶ್ ಕಜೆ ವಾದಿಸಿದರು.