
ಉಳ್ಳಾಲ: ಉಳ್ಳಾಲ ಮತ್ತು ಸೋಮೇಶ್ವರ ಉಚ್ಚಿಲದಲ್ಲಿ ರವಿವಾರ ಕಡಲ್ಕೊರೆತ ಆರಂಭವಾಗಿದ್ದು, ಸೋಮೇಶ್ವರ ಉಚ್ಚಿಲದಲ್ಲಿ ತಾತ್ಕಾಲಿಕ ತಡೆಗೋಡೆಯ ಕಲ್ಲುಗಳು ಸಮುದ್ರಪಾಲಾಗಿವೆ. ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ.
ಕೆಲವು ದಿನಗಳಿಂದ ಮಳೆ ಕಡಿಮೆಯಿದ್ದರೂ ವೇಗವಾದ ಗಾಳಿಯಿಂದಾಗಿ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ. ರವಿವಾರ ಸಂಜೆಯ ವೇಳೆಗೆ ಸುಮಾರು 200 ಮೀ. ಉದ್ದಕ್ಕೆ ಕಡಲ ತೀರದಲ್ಲಿ ಹಾಕಲಾಗಿರುವ ಕಲ್ಲುಗಳ ಅಡಿಯ ಮರಳು ಕರಗಿ ಕಲ್ಲುಗಳು ಸಮುದ್ರ ಪಾಲಾಗುತ್ತಿವೆ.
ಹಲವು ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು, ಸಮೀಪದ ಅಂಗಡಿಗೂ ಹಾನಿಯಾಗಿದೆ. ಈ ಭಾಗದಲ್ಲಿ ತಾತ್ಕಾಲಿಕ ಬ್ರೇಕ್‍ವಾಟರ್ ಕಾಮಗಾರಿ ಆರಂಭದಿಂದ ಈ ಸಮಸ್ಯೆ ಹೆಚ್ಚಾಗಿದೆ. ಉಳ್ಳಾಲದ ಸೀಗ್ರೌಂಡ್, ಕಿಲೇರಿಯಾ ನಗರ, ಮುಕ್ಕಚ್ಚೇರಿ ಪ್ರದೇಶದಲ್ಲೂ ಸಮುದ್ರದ ಅಲೆಗಳು ಮನೆಗಳಿಗೆ ಅಪ್ಪಳಿಸುತ್ತಿವೆ.













