Tuesday, March 17, 2026
ಸುದ್ದಿ

ಮಂಗಳೂರಲ್ಲಿ ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿ ಬಂಧನ – ಕಹಳೆ ನ್ಯೂಸ್

ಮಂಗಳೂರು: ಎಕನಾಮಿಕ್, ನಾರ್ಕೋಟಿಕ್ಸ್ ಕ್ರೈಮ್ ಪೊಲೀಸರ ಕಾರ್ಯಾಚರಣೆಯಲ್ಲಿ, ಮಂಗಳೂರಲ್ಲಿ ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿ ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂನನ್ನು ಬಂಧಿಸಲಾಗಿದೆ. ಮಂಗಳೂರಿನ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿನ ಶ್ರೀರಾಂ ಗ್ಯಾರೇಜ್ ಬಳಿ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದು, ಪೊಲೀಸರು 1 ಕೆಜಿ 100 ಗ್ರಾಂ ತೂಕದ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ. ಆಕ್ಟಿವಾ ಹೋಂಡಾ, ಮೊಬೈಲ್, ಡಿಜಿಟಲ್ ತೂಕ ಮಾಪನ ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿರುದ್ದ ಈಗಾಗಲೇ ಒಟ್ಟು 11 ಗಾಂಜಾ ಪ್ರಕರಣಗಳು ದಾಖಲಾಗಿದೆ. ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕೇಸ್‍ಗಳು ದಾಖಲಾಗಿದ್ದವು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು