
ಕಡಬ: ಆಧುನಿಕ ಯುಗದಲ್ಲಿ ವಾಣಿಜ್ಯ ಬೆಳೆಗಳಾದ ಅಡಿಕೆ, ರಬ್ಬರ್ ಕೃಷಿಯತ್ತ ಜನರು ಆಕರ್ಷಿತರಾಗುತ್ತಿರುವ ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಗೆ ಪ್ರೋತ್ಸಾಹ ಅಗತ್ಯವಿದೆ ಎಂದು ಸರಸ್ವತಿ ವಿದ್ಯಾಲಯದ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ ಹೇಳಿದರು.

ಇವರು ಸಂಸ್ಥೆಯ ಪೋಷಕರಲ್ಲಿ ಭತ್ತದ ಕೃಷಿ ಮಾಡುತ್ತಿರುವ ಪೋಷಕರನ್ನು ಸನ್ಮಾನಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಧನಂಜಯ ಕೊಡಂಗೆ, ಸುಜಾತ, ಸಂಜೀವಿನಿ, ಪದ್ಮನಾಭ, ಬಾಲಕೃಷ್ಣ ನಾೈಕ್ ಚೆನ್ನಪ್ಪ ಗೌಡ ಇವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಸಂಚಾಲಕ ವೆಂಕಟ್ರಮಣ ರಾವ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಮಾಧವ ಗೌಡ ಕೋಲ್ಪೆ, ಪ್ರೌಢ ವಿಭಾಗದ ಮುಖ್ಯಸ್ಥೆ ಶೈಲಶ್ರೀ ರೈ, ಕಾಲೇಜು ವಿಭಾಗದ ಉಪನ್ಯಾಸಕರಾದ ನಾಗರಾಜ್ ರಾಮಕುಂಜ ಉಪಸ್ಥಿತರಿದ್ದರು.















