
ವಿಟ್ಲ : ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರ ತಂಡವೊಂದು ಅತ್ಯಾಚಾರ ಮಾಡಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಐವರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.


ವಿಟ್ಲ ಮುಟ್ನೂರು ನಿವಾಸಿಯಾದ 17 ವರ್ಷದ ಬಾಲಕಿ ಮೇಲೆ ಈ ಕೃತ್ಯ ನಡೆದಿದ್ದು, ಈಕೆ ಎಸ್‍ಎಸ್‍ಎಲ್‍ಸಿ ನಂತರ ಮನೆಯಲ್ಲೇ ಇದ್ದಳು.
ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿದಂತೆ ಐವರ ತಂಡ ಈಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಬಗ್ಗೆ ಯಾರಲ್ಲಿಯೂ ಹೇಳದಂತೆ ಬೆದರಿಕೆ ಹಾಕಲಾಗಿತ್ತು.
ಆಶಾ ಕಾರ್ಯಕರ್ತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.













