Sunday, March 15, 2026
ಸುದ್ದಿ

ನಿಯಂತ್ರಣ ತಪ್ಪಿದ ಲಾರಿ : ಮೂರು ಕಾರು ಜಖಂ – ಕಹಳೆ ನ್ಯೂಸ್

ಮಂಗಳೂರು : ಲಾರಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮುಂದಿದ್ದ ಮೂರು ಕಾರು ಒಂದಕ್ಕೊಂದು ಢಿಕ್ಕಿಯಾದ ಘಟನೆ ನಗರದ ಪಂಪ್‍ವೆಲ್ ಬಳಿ ನಡೆದಿದೆ. ಕ್ರೇಟಾ, ಹಾಗೂ ಟ್ರಾವೆರಾ ಕಾರಿಗೆ ಹೆಚ್ಚಿನ ಅನಾಹುತ ಸಂಭವಿಸಿದ್ದು, ಕಾರಿನ ಹಿಂಭಾಗ ಮತ್ತು ಮುಂಭಾಗ ಸಂಪೂರ್ಣ ಜಖಂ ಆಗಿದೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದ ಪರಿಣಾಮ ಮೂವರಿಗೆ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆಯ ಕುರಿತು ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು