Saturday, May 2, 2026
ಸುದ್ದಿ

ಅಕ್ರಮ ದನದ ಮಾಂಸ ಸಾಗಾಟ – ದ್ವಿಚಕ್ರ ವಾಹನ ಸಹಿತ ಆರೋಪಿಯ ಬಂಧನ – ಕಹಳೆ ನ್ಯೂಸ್

ಬಂಟ್ವಾಳ : ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ದ್ವಿಚಕ್ರ ವಾಹನ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ನಂದಾವರದ ನಿವಾಸಿ ಮುಹಮ್ಮದ್ ಸಮೀನ್ ಬಂಧಿತ ಆರೋಪಿ. ಈತ ಶುಕ್ರವಾರದಂದು ಮಂಚಿ ಸಮೀಪದ ಬೊಳ್ಳಾಯಿ ಎಂಬಲ್ಲಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಸ್ಸೈ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ದ್ವಿಚಕ್ರ ವಾಹನದಲ್ಲಿದ್ದ 12 ಕೆ.ಜಿ. ದನದ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು