ಕೋಲಾರ: ಟಿಕ್ ಟಾಕ್ ಕ್ರೇಜ್‍ಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಈ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.
ಟಿಕ್ ಟಾಕ್ ವಿಡಿಯೋ ಚಿತ್ರೀಕರಿಸುವ ವೇಳೆ, ಕೃಷಿ ಹೊಂಡಕ್ಕೆ ಬಿದ್ದು ಉಸಿರುಗಟ್ಟಿ ಕೋಲಾರ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮಾಲಾ ಮೃತಟ್ಟಿದ್ದಾರೆ. ಈಕೆ ಬಿ.ಎ ಅಂತಿಮ ವರ್ಷ ಓದುತ್ತಿದ್ದ ವಿದ್ಯಾರ್ಥಿನಿ ಆಗಿದ್ದು, ಈ ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.









