Recent Posts

Saturday, May 9, 2026
ಸುದ್ದಿ

ಮುಂಬೈನಲ್ಲಿ ಕುಸಿದ ಕಟ್ಟಡ: ಹನ್ನೆರಡು ಮಂದಿ ದುರ್ಮರಣ – ಕಹಳೆ ನ್ಯೂಸ್

ಮುಂಬೈನ ಡೊಂಗ್ರಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 40 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಎನ್‍ಡಿಆರ್‍ಎಫ್‍ನ 5ನೇ ಬೆಟಾಲಿಯನ್‍ನ ಎರಡು ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿರತವಾಗಿವೆ. ಅಗ್ನಿಶಾಮಕ ದಳದ ತಂಡಗಳು ಕೂಡ ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾದಲ್ಲಿ ತೊಡಗಿವೆ.

ಈ ಕಟ್ಟಡ ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ್ದು ಎನ್ನಲಾಗಿದೆ.