
ಉಡುಪಿ : ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ, ಚಂದ್ರ ಗ್ರಹಣ ಪ್ರಯುಕ್ತ ಗ್ರಹಣ ಸ್ಪರ್ಶಕಾಲದಲ್ಲಿ, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಸ್ನಾನ ಮಾಡಿ ಗ್ರಹಣ ಕಾಲದಲ್ಲಿ ಜಪಾನುಷ್ಠಾನ ಮಾಡಿ ಕೃಷ್ಣ ದೇವರ ವಿಶೇಷ ಪೂಜೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಸ್ನಾನ ಮಾಡಿ ಜಪ ಪಾರಾಯಣಾದಿಗಳನ್ನು ಮಾಡಿದರು.















