Saturday, March 14, 2026
ಕ್ರೀಡೆ

ಕ್ರಿಕೆಟ್ ಮಾಂತ್ರಿಕ ಸಚಿನ್‍ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ – ಕಹಳೆ ನ್ಯೂಸ್

ಲಂಡನ್: ಭಾರತೀಯ ಕ್ರಿಕೆಟ್ ರಂಗದ ದಂತಕಥೆ ಮತ್ತು ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯಿಂದ, ಹಾಲ್ ಆಫ್ ಫೇಮ್ ಗೌರವ ಲಭಿಸಿದೆ. ಸಚಿನ್ ಅವರೊಂದಿಗೆ ದಕ್ಷಿಣ ಆಫ್ರಿಕಾದ ತಾರೆ ಅಲಾನ್ ಡೊನಾಲ್ಡ್ ಅವರಿಗೂ ಸಹ ಈ ಗೌರವ ನೀಡಲಾಗಿದೆ.

ಐಸಿಸಿ ಹಾಲ್ ಆಫ್ ಫೇಮ್ (ಕ್ರಿಕೆಟ್ ದಿಗ್ಗಜರ ಸಭಾಂಗಣ) ಗೌರವಕ್ಕೆ ಎರಡು ಬಾರಿ ವಿಶ್ವಕಪ್ ಗೆಲುವಿಗೆ ಕಾರಣರಾದ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ಪಟು ಕ್ಯಾಥ್ರಿನ್ ಫಿಟ್ಜ್ ಪ್ಯಾಟ್ರಿಕ್ ಅವರೂ ಕೂಡ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ರಾಜಧಾನಿ ಲಂಡನ್‍ನಲ್ಲಿ ನಡೆದ ಐಸಿಸಿ ಹಾಲ್ ಆಫ್ ಫೇಮ್ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮಗೆ ಲಭಿಸಿದ ಅಂತಾರಾಷ್ಟ್ರೀಯ ಗೌರವಕ್ಕೆ ಸಿಡಿಲಬ್ಬರದ ಬ್ಯಾಟ್ಸ್‍ಮ್ಯಾನ್ ಸಚಿನ್ ಅಪಾರ ಸಂತಸ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು