Wednesday, March 18, 2026
ಸುದ್ದಿ

ಗಾಂಜಾ ಮಾರಾಟ ವಿರುದ್ಧ ಮಾತ್ರವಲ್ಲ ಕೇಸು ಗಾಂಜಾ ಸೇದುವವರಿಗೂ ಬೀಳುತ್ತೆ ‘ಕೇಸ್’ – ಕಹಳೆ ನ್ಯೂಸ್

ಇದುವರೆಗೂ ಗಾಂಜಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಕೇಸು ದಾಖಲಿಸುತ್ತಿದ್ದ ಪೊಲೀಸರು ಈಗ ಗಾಂಜಾ ಸೇದುವವರಿಗೂ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಗಾಂಜಾ ಸೇವನೆ ಮಾಡಿದ್ದ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಹಲಸೂರಿನ 19 ವರ್ಷದ ಮನೋಹರ್ ಎಂಬಾತ ಜುಲೈ 17ರಂದು ಚಲ್ಲಘಟ್ಟ ಮುಖ್ಯರಸ್ತೆಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದು, ರಾತ್ರಿ ಗಸ್ತಿನಲ್ಲಿದ್ದ ಜೀವನ್ ಭೀಮಾ ನಗರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆ ವೇಳೆ ಆತನ ವರ್ತನೆ ಸಂಶಯಾಸ್ಪದವಾಗಿ ಕಂಡುಬಂದ ಕಾರಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೊಳಪಡಿಸಿದ್ದು, ಈ ವೇಳೆ ಆತ ಗಾಂಜಾ ಸೇವಿಸಿರುವುದು ತಿಳಿದುಬಂದಿದೆ. ಹಿನ್ನೆಲೆಯಲ್ಲಿ ಮನೋಹರ್ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು