
ಒಡಿಯೂರು: ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿಯ ಆಶ್ರಯದಲ್ಲಿ 29-07-2019 ನೇ ಸೋಮವಾರದಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಜನ್ಮದಿನೋತ್ಸವವನ್ನು ಗುರುವಂದನೆಯೊಂದಿಗೆ ಗ್ರಾಮೋತ್ಸವವಾಗಿ ಆಚರಿಸಲಾಗುವುದು. ಇದರ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

















