Friday, March 20, 2026
ರಾಜಕೀಯಸುದ್ದಿ

‘ನಾಪತ್ತೆಯಾಗಿದ್ದ ಶಾಸಕ ಆನಂದ್ ಸಿಂಗ್ ಪತ್ತೆ’ –ಕಹಳೆ ನ್ಯೂಸ್

ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ಆನಂದ್ ಸಿಂಗ್‍ನ ಮೇಲೆ ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದು ಈಗ ಶಾಸಕ ಪತ್ತೆಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆನಂದ್ ಸಿಂಗ್ ಅತೃಪ್ತ ಶಾಸಕರ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಅವರು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಾವು ನಾಪತ್ತೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ತಂದೆ ಜಾರಿ ಬಿದ್ದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳ್ಳಾರಿ ಮತ್ತು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಕಾರಣದಿಂದ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾಗಿ ಅವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು