
ಮಡಿಕೇರಿ: ಕಳೆದ ವರ್ಷ ಜಲಪ್ರಳಯಕ್ಕೆ ನಲುಗಿ ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಮತ್ತೆ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ ಮಳೆ ಬಿರುಸುಗೊಳ್ಳುತಿದ್ದಂತೆ ಮಡಿಕೇರಿ ಪಟ್ಟಣ ಸೇರಿದಂತೆ ಹಲವೆಡೆ ಧರೆಗಳು ಕುಸಿಯುತ್ತಿದೆ.
ಕಳೆದ ವರ್ಷ ಕುಸಿದಿದ್ದ ಸ್ಥಳಗಳಲ್ಲಿ ಮತ್ತೆ ಭೂ ಕುಸಿತ ಸಂಭವಿಸುವ ಅಪಾಯ ಎದುರಾಗಿದೆ. ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ಮತ್ತೇ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯ ವಾಹನ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.
ಕಳೆದ ಭಾರಿ ಜೋಡುಪಾಲದಲ್ಲಿ ಭಾರೀ ಕುಸಿತ ಉಂಟಾಗಿ ಹಲವು ತಿಂಗಳು ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಮಲೆನಾಡು-ಕರಾವಳಿ ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಟಿಸಿದೆ.









