Recent Posts

Saturday, May 9, 2026
ಸುದ್ದಿ

ರಿಕ್ಷಾದಲ್ಲಿ ಅಕ್ರಮ ಗೋ ಮಾಂಸ ಮಾರಾಟ ಮಾಡಲು ಯತ್ನ; ಮೂವರ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡಿ, ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣಾಧಿಕಾರಿ ಸೌಮ್ಯ ನೇತೃತ್ವದ ತಂಡ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ನಿವಾಸಿಗಳಾದ ಅಬ್ದುಲ್ ರಜಾಕ್, ರಾಜಿಕ್, ರಿಯಾಜ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಬ್ದುಲ್ ರಜಾಕ್ ಎಂಬಾತನ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಕಳ್ಳತನ ಮಾಡಿ, ಕಡಿದು ಮಾಂಸ ಮಾಡಿ ಅಟೋ ರಿಕ್ಷಾದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ 60 ಕೆಜಿ ದನದ ಮಾಂಸ, ಅಟೋ ರಿಕ್ಷಾ ಹಾಗೂ ಕೆಲವು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 1,22,000 ಆಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.