
ಆಗುಂಬೆ:ಮರವೊಂದು ರಸ್ತೆ ಮಧ್ಯೆ ಉರುಳಿ ಬಿದ್ದು ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾದ ಘಟನೆ ಸೋಮವಾರ ಬೆಳಗ್ಗೆ ಆಗುಂಬೆ ಘಾಟಿಯಲ್ಲಿ ನಡೆದಿದೆ.
ಸೋಮೇಶ್ವರದಿಂದ ಆಗುಂಬೆ ಘಾಟಿ ಹತ್ತುವ ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದು, ಕೆಲ ಹೊತ್ತು ಸಂಚಾರಕ್ಕೆ ಅನಾನುಕೂಲವಾಗಿತ್ತು. ಬೆಳಗ್ಗೆ ನಡೆದ ಘಟನೆಯಾದ ಕಾರಣ ಸಹಜವಾಗಿಯೇ ಘಾಟಿ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿದ್ದವು.
ಬಸ್ ಸಿಬ್ಬಂದಿ, ಪ್ರಯಾಣಿಕರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಎತ್ತಿ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.









