Monday, May 4, 2026
ಸುದ್ದಿ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಬಿ.ಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಬಿ.ಎಸ್ ಯಡಿಯೂರಪ್ಪ ಅವರು ತಮ್ಮ 7ನೇ ಪ್ರಯತ್ನದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 15 ತಿಂಗಳಲ್ಲಿ ಲಿಂಗಾಯತ ಪ್ರಬಲ ನಾಯಕನಾಗಿರುವ ಯಡಿಯೂರಪ್ಪ, ಈ ಅವಧಿಯಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಗುರುವಾರ ಬಿಜೆಪಿ ಹೊಸ ಸರ್ಕಾರ ರಚಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಒಂದು ವಾರದ ಬಳಿಕ ಉಳಿದ ಸಂಪುಟ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬುಧವಾರ ಪಕ್ಷೇತರ ಶಾಸಕರ ಪರ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ಅದಾದ ಬಳಿಕ ಬಿಎಸ್‍ವೈಗೆ ಸ್ವಲ್ಪ ನಿರಾಳವಾಗಲಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಮಾಡಬಹುದೆಂಬ ಭಯದಿಂದ ಯಡಿಯೂರಪ್ಪ ಮುಕ್ತರಾಗಿದ್ದಾರೆ.

ಇನ್ನೂ ಸಂಪುಟಕ್ಕೆ ಸಚಿವರನ್ನು ಹಿರಿತನ, ಜಾತಿ ಸಮೀಕರಣದ ಮೇಲೆ ಆಯ್ಕೆ ಮಾಡಿ ಹೈಕಮಾಂಡ್ ಸೂಚನೆಯಂತೆ ಸಚಿವ ಸ್ಥಾನ ನೀಡಲಾಗುವುದು. ಮಂಗಳವಾರ ವಿಧಾನಸಭೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ವಿಶ್ವಾಸ ಮತದಲ್ಲಿ ಸೋಲು ಅನುಭವಿಸಿದ ನಂತರ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಇಂದು ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಬಂಡಾಯ ಶಾಸಕರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ತಿಳಿಸಿದ್ದಾರೆ.

ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ಸೇರಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಹೇಳಿದ್ದಾರೆ.