Monday, May 4, 2026
ಸುದ್ದಿ

ಕೊಡಗಿನ ಮಳೆಹಾನಿ ಸಂತ್ರಸ್ತರಿಗೆ ಮೂಲಭೂತ ಸೌಕರ್ಯ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2018ರ ಮುಂಗಾರಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ರಸ್ತೆ ಮತ್ತಿತರ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಸುಮಾರು 535 ಕೋಟಿ ರೂ. ಅಗತ್ಯವಿದ್ದು, ಕೂಡಲೇ ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಡಗು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅತಿವೃಷ್ಟಿ, ಭೂ ಕುಸಿತದಿಂದ ರಸ್ತೆ, ಕಟ್ಟಡ ಸೇರಿದಂತೆ ಸುಮಾರು 1400 ಕೋಟಿ ರೂ. ಮೌಲ್ಯದ ಮೂಲಸೌಲಭ್ಯ ವ್ಯವಸ್ಥೆಗಳು ನಾಶವಾಗಿವೆ. ಈವರೆಗೆ ಭಾರತ ಸರ್ಕಾರದಿಂದ 58 ಕೋಟಿ ಹಾಗೂ ರಾಜ್ಯ ಸರ್ಕಾರದ ವಿಶೇಷ ಅನುದಾನ 85 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳು, ನಗರ ಪ್ರದೇಶದಲ್ಲಿ ಚರಂಡಿ ಮತ್ತಿತರ ವ್ಯವಸ್ಥೆಗಳ ಶಾಶ್ವತ ದುರಸ್ತಿಗೆ ಸುಮಾರು 535 ಕೋಟಿ ರೂ. ಗಳ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಈ ಸೌಕರ್ಯಗಳ ಪುನರ್ ನಿರ್ಮಾಣಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಕೊಡಗು ಜಿಲ್ಲೆಯ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುನಿಲ್ ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.