Saturday, May 9, 2026
ಸುದ್ದಿ

ಎಕೆ 47 ಬಂದೂಕು, 3 ಲೋಡೆಡ್ ಮ್ಯಾಗಜಿನ್; ಗಡಿಯಲ್ಲಿ `ಲೆಫ್ಟಿನೆಂಟ್ ಕರ್ನಲ್ ಧೋನಿ’ ಗಸ್ತು ಆರಂಭ – ಕಹಳೆ ನ್ಯೂಸ್

ಶ್ರೀನಗರ: ಭಾರತೀಯ ಸೇನೆಯ ಅರೆಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ಹೊಂದಿರುವ ಭಾರತೀಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರಿಗೆ ನಿಜವಾದ ಸವಾಲು ಇಂದಿನಿಂದ ಶುರುವಾಗಿದ್ದು, ಧೋನಿ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಗಸ್ತು ತಿರುಗುವ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಕಾಶ್ಮೀರದಲ್ಲಿ ಸೇವೆ ಸಲ್ಲಿಸುವ ಅವಕಾಶ ಕೋರಿದ್ದ ಧೋನಿ ಬೇಡಿಕೆಯನ್ನು ಇತ್ತೀಚೆಗಷ್ಟೇ ಮಾನ್ಯ ಮಾಡಿದ್ದ ಭಾರತೀಯ ಸೇನೆ, ಧೋನಿಯನ್ನು ಜುಲೈ 31ರಿಂದ ಆಗಸ್ಟ್ 15ವರೆಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಮುಂದಿನ 15 ದಿನಗಳ ಅವಧಿಯಲ್ಲಿ ಧೋನಿ ಅರೆಸೇನಾಪಡೆಯ ವಿಕ್ಟರ್ ಫೋರ್ಸ್‍ನೊಂದಿಗೆ ಗಸ್ತು ತಿರುಗಲಿದ್ದಾರೆ. ಅಲ್ಲದೆ ಧೋನಿ ಇದೇ ವಿಕ್ಟರ್ ಫೋರ್ಸ್ ಸೈನಿಕರೊಂದಿಗೇ ಇರಲಿದ್ದು, ಸೈನಿಕರು ನಿರ್ವಹಿಸುವ ಎಲ್ಲಾ ಕೆಲಸಗಳನ್ನೂ ಮಾಡಲಿದ್ದಾರೆ. ಇನ್ನು ಧೋನಿ ಅವರಿಗೆ ಇತರೆ ಸೇನಾಧಿಕಾರಿಗಳಂತೆ ಒಂದು ಎಕೆ 47 ಬಂದೂಕು ನೀಡಲಿದ್ದು, ಅದರೊಂದಿಗೆ ಬುಲೆಟ್‍ಗಳು ತುಂಬಿರುವ ಮೂರು ಮ್ಯಾಗಜಿನ್ ಅನ್ನೂ ಕೂಡ ನೀಡಲಾಗುತ್ತದೆ ಎಂದು ಸೇನಾ ಮೂಲಗಳು ತಿಳಿಸಿವೆ.