
ಚಿಕ್ಕಮಗಳೂರು; ಉದ್ಯಮಿ ಸಿದ್ಧಾರ್ಥ್ ಅವರ ಪಾರ್ಥಿವ ಶರೀರವು ಇದೀಗ ಮಲೆನಾಡಿನ ಹೆಬ್ಬಾಗಿಲು ಕೊಟ್ಟಿಗೆ ಹಾರ ಮೂಲಕ ಅವರ ಹುಟ್ಟೂರಿಗೆ ತಲುಪಿತು. ಸಿದ್ಧಾರ್ಥ್ ಅವರ ಅಂತಿಮ ದರ್ಶನ ಪಡೆಯಲು ರಸ್ತೆಯುದ್ದಕ್ಕೂ ಕಿಕ್ಕಿರಿದು ಸೇರಿದ್ದ ಸಾವಿರಾರು ಅಭಿಮಾನಿಗಳು ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದರು.

ಸಿದ್ಧಾರ್ಥ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕೊಟ್ಟಿಗೆಹಾರ ಹಾಗೂ ಬಣಕಲ್‍ನಲ್ಲಿ ಸ್ವಯಂ ಘೋಷಿತ ಬಂದ್ ವ್ಯವಸ್ಥೆ ಏರ್ಪಟ್ಟಿತ್ತು. ಸಿದ್ಧಾರ್ಥ್ ಅವರ ಪಾರ್ಥಿವ ಶರೀರ ಸಾಗುವ ದಾರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಅಂತಿಮ ದರ್ಶನಕ್ಕಾಗಿ ಸಾವಿರಾರು ಜನರು ಬೆಳಿಗ್ಗೆಯಿಂದಲೇ ಕಾಯುತ್ತಿದ್ದರು.









