
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸರಕಾರಿ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅಲ್ಲಿನ ಸ್ಥಿತಿಗತಿಗಳ ಕುರಿತು ಸಮೀಕ್ಷೆ ನಡೆಸಬೇಕು ಎಂದು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಪುತ್ತೂರು ಸಹಾಯಕ ಕಮಿಷನರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚು ಇರುವುದರಿಂದ ವಿದ್ಯಾರ್ಥಿ ನಿಲಯಗಳ ಸಮಸ್ಯೆಗಳ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಸಹಿತ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.
ಮೂಲಭೂತ ಸೌಕರ್ಯಗಳು ಇಲ್ಲದ ಹಾಗೂ ಯಾವುದೇ ಭದ್ರತೆ ಇಲ್ಲದ ಕಟ್ಟಡಗಳಲ್ಲಿ ಸರಕಾರ ವಿದ್ಯಾರ್ಥಿ ನಿಲಯಗಳನ್ನು ನಡೆಸುತ್ತಿದೆ ಜು 29ಕ್ಕೆ ರಾತ್ರಿ ಪುತ್ತೂರು ನಗರದ ಉರ್ಲಾಂಡಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಆದ ಘಟನೆಯೇ ಉದಾಹರಣೆ. ಈ ಘಟನೆಯನ್ನು ವಿದ್ಯಾರ್ಥಿ ಪರಿಷತ್ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಕುರಿತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ನಿಯೋಗದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ್ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಘಟಕದ ಅಧ್ಯಕ್ಷ ಜೀವನ್ ಪಟ್ಟೆ, ಕಾರ್ಯದರ್ಶಿ ಚೇತನ್ ಪಂಜ, ಸಹ ಕಾರ್ಯದರ್ಶಿ ಸಿದ್ಧಾಂತ್ ಕಲ್ಲೇಗ ಕಾರ್ಯಕರ್ತರಾದ ರೋಹಿತ್ ಶೆಟ್ಟಿ, ಹೇಮಂತ್ ಡಿ., ದೀಪಕ್ ಪದ್ಮಾರ್, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿಧ್ಯಾರ್ಥಿಗಳಾದ ಆದಿತ್ಯ, ಅಭಿಷೇಕ್, ರಾಜ ನಾರಾಯಣ, ಪ್ರಜ್ವಲ್ ಉಪಸ್ಥಿತರಿದ್ದರು.









