
ಪಡಂಗಡಿ: ಆಟಿ ತಿಂಗಳಿನಲ್ಲಿ ತುಳುನಾಡಿನಲ್ಲೆಡೆ ಆಟಿಡೊಂಜಿ ಕೂಟ, ಆಟಿಡೊಂಜಿ ದಿನ, ಹೀಗೆ ಹಲವು ಹೆಸರಿನಿಂದ ಗಾಮೀಣ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಈ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಎಲ್ಲರೂ ಸಂಭ್ರಮ ಪಡುತ್ತಾರೆ.

ಈ ಹಿನ್ನಲೆಯಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ ಶ್ರೀ ಕ್ಷೇತ್ರ ಪಡಂಗಡಿ ಇವರ ಆಶ್ರಯದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರ ಮಾರು ಗದ್ದೆಯಲ್ಲಿ ಆಗಸ್ಟ್ 4 ರಂದು ಕೆಸರ್ರ್ಡ್ ಇಡೀ ದಿನ ಎಂಬ ಗ್ರಾಮೀಣ ಕ್ರೀಡಾ ಕೂಟವನ್ನು ಆಯೋಜಿಸಲಿದೆ.

ಈ ಕ್ರೀಡಾಕೂಟದಲ್ಲಿ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.









