
ಹಿಂದೂ ಕಾರ್ಯಕರ್ತರ ಹಾಗೂ ಗೋರಕ್ಷಕರ ಮೇಲೆ ದಾಖಲಾಗಿರುವ ಸುಳ್ಳು ಮೊಕದ್ದಮೆಗಳನ್ನು, ಹಿಂಪಡೆಯಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ವಿವಿದೆಡೆಗಳಲ್ಲಿ ಅಮಾಯಕ ಗೋರಕ್ಷಕರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಲು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.









