Monday, May 4, 2026
ಸುದ್ದಿ

ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ; ಸುಪ್ರೀಂ ಕೋರ್ಟ್ ಆದೇಶ; ಆರೋಪಿ ಶಾಸಕ ಬಿಜೆಪಿಯಿಂದ ಉಚ್ಚಾಟನೆ; – ಕಹಳೆ ನ್ಯೂಸ್

ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಸಂತ್ರಸ್ತೆಗೆ ಮಧ್ಯಂತರ ಪರಿಹಾರ ಒದಗಿಸುವ ಕುರಿತಾದ ಪ್ರಶ್ನೆಯನ್ನು ಕೂಡ ನಾವು ಪರಿಗಣಿಸುತ್ತಿದ್ದೇವೆ ಎಂದು ನ್ಯಾಯಾಲಯ, ಆಕೆಗೆ ಉತ್ತರ ಪ್ರದೇಶ ಸರ್ಕಾರವು 25 ಲಕ್ಷ ರೂಪಾಯಿಯನ್ನು ಮಧ್ಯಂತರ ಪರಿಹಾರವಾಗಿ ನೀಡಬೇಕು ಎಂದು ಸೂಚಿಸಿತು. ಜೊತೆಗೆ ಸಂತ್ರಸ್ಥೆ ಮೇಲೆ ಅಪಘಾತ ಎಸಗಿರುವ ಬಗ್ಗೆ ಶೀಘ್ರದಲ್ಲಿ ತನಿಖೆ ನಡೆಸ ಬೇಕೆಂದು ಕೋರ್ಟ್ ಆದೇಶಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಜೈಲಿನಲ್ಲಿದ್ದುಕೊಂಡೇ ಆಕೆಯ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಒಳಗಾಗಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್‍ನ್ನು, ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ.

ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿರುವ ಕುಲದೀಪ್ ಸೆಂಗರ್, ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರನ್ನು ಕೊಲ್ಲಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ರಾಯ್ ಬರೇಲಿ ಸಮೀಪ ಟ್ರಕ್ ಒಂದು ಸಂತ್ರಸ್ತೆಯಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಅದರಲ್ಲಿ ಆಕೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದರೆ, ಸಂತ್ರಸ್ತೆ ಮತ್ತು ಆಕೆಯ ಪರ ವಕೀಲರು ತೀವ್ರ ಗಾಯಗೊಂಡಿದ್ದಾರೆ.

ಇದು ಬಿಜೆಪಿಯ ಪ್ರಭಾವಿ ಶಾಸಕ ಸೆಂಗರ್ ಅವರ ನಿರ್ದೇಶನದಂತೆ ನಡೆದಿರುವ ಕೊಲೆ ಪ್ರಯತ್ನ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಸೆಂಗರ್ ಅವರನ್ನು ಪಕ್ಷದಿಂದ ಹೊರಹಾಕದ ಮತ್ತು ಯಾವುದೇ ಪ್ರತಿಕ್ರಿಯೆ ನೀಡದ ಬಿಜೆಪಿ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. ಕೊನೆಗೆ ಪಕ್ಷದಿಂದ ಅವರನ್ನು ಅಮಾನತುಗೊಳಿಸಲಾಗಿತ್ತು. ಈಗ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅದರ ಬೆನ್ನಲ್ಲೇ ಕೊನೆಗೂ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡುವ ಪ್ರಕಟಣೆ ಹೊರಡಿಸಲಾಗಿದೆ.

ಇದರ ಜತೆಗೆ ಅತ್ಯಾಚಾರ ಸಂತ್ರಸ್ತೆಯ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಪೈಕಿ ಇಬ್ಬರು ಮಹಿಳಾ ಪೊಲೀಸರು ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆಕೆಯ ರಕ್ಷಣೆಗೆ 9 ಮಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಅಪಘಾತ ನಡೆದ ದಿನ ಕಾರಿನಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಕಾರಿನಲ್ಲಿ ಜಾಗವಿಲ್ಲದ ಕಾರಣ ಬರುವುದು ಬೇಡ ಎಂದು ಸ್ವತಃ ಸಂತ್ರಸ್ತೆಯ ಕುಟುಂಬದವರೇ ಸಿಬ್ಬಂದಿಗೆ ಹೇಳಿದ್ದರು ಎಂದು ಹೇಳಲಾಗಿದೆ. ಅಪಘಾತ ನಡೆಸುವ ಉದ್ದೇಶದಿಂದ ಅವರ ಜತೆ ಹೋಗದಂತೆ ಪೊಲೀಸರಿಗೆ ಇಲಾಖೆ ಕಡೆಯಿಂದಲೇ ಸೂಚನೆ ಬಂದಿತ್ತು ಎಂದು ಆರೋಪಿಸಲಾಗಿದೆ.