Monday, May 4, 2026
ಸುದ್ದಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಉಚಿತ ಸಮವಸ್ತ್ರ ವಿತರಣೆ – ಕಹಳೆ ನ್ಯೂಸ್

ಅಡ್ಯನಡ್ಕ:  ಅಭಯ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಮತ್ತು ಜನತಾ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿ ಸಂಘ, ಅಡ್ಯನಡ್ಕ ಇವರ ಜಂಟಿ ಆಶ್ರಯದಲ್ಲಿ ಉಚಿತ ಶಾಲಾ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜನತಾ ವಿದ್ಯಾಸಂಸ್ಥೆಗಳ ವಾರಣಾಸಿ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನತಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಉಚಿತ ಸಮವಸ್ತ್ರ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಅಭಯ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಗೋಪಾಲ ಮಣಿಯಾಣಿ ಈ ಯೋಜನೆಯ ಪ್ರಾಯೋಜಕತ್ವ ವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಉಳಯ ಪ್ರಸ್ತಾವನೆಗೈದರು. ಅಧ್ಯಾಪಕ ವೃಂದದ ಸುಂದರ ಜಿ. ಹಾಗೂ ಕುಸುಮಾವತಿ ವಿದ್ಯಾರ್ಥಿಗಳ ವಿವರ ವಾಚಿಸಿದರು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ಸ್ವಾಗತಿಸಿ, ಜನತಾ ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯ ಮಾಧವ ನಾಯ್ಕ್ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಂ.ಕೆ. ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.