
ಬೆಳ್ತಂಗಡಿ: ಬೈಕ್ ಹಿಂದೆ ಕೂತಿದ್ದ ಮಹಿಳೆಯ ಬಟ್ಟೆ ಟಯರ್ ಗೆ ಸಿಲುಕಿ, ಬೈಕ್ ರಸ್ತೆಗೆ ಬಿದ್ದು ತಲೆಗೆ ತೀವ್ರ ಏಟಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ರಾಝೀಕ್ ಎಂಬಾತ ಬಿ. ಪಾತಿಮ ಎಂಬುವವರನನ್ನು ಕುಳ್ಳಿರಿಸಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮಹಿಳೆಯ ಬಟ್ಟೆ ಬೈಕ್‍ನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಹಿಂಬದಿ ತಲೆಗೆ ತೀವ್ರ ಗಾಯಗಳಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಕಣಿಯೂರು ನಿವಾಸಿ ಅಬುಬ್ಬಕ್ಕರ್ ಸಿದ್ದೀಕ್ ಎಂಬವರು ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಲಂ; 279, 304(ಎ) ಐ.ಪಿ.ಸಿಯಂತೆ ಪ್ರಕರಣ ದಾಖಲಾಗಿದೆ.









