Monday, May 4, 2026
ರಾಜಕೀಯ

ದೋಸ್ತಿಗಳಿಗೆ ಶಾಕ್, ಮೈತ್ರಿ ಸರ್ಕಾರದ ರಾಜಕೀಯ ನೇಮಕಾತಿಗಳ ರದ್ದು ಮಾಡಿದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಲೇ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಿಗೆ ಶಾಕ್ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ರಾಜಕೀಯ ನೇಮಕಾತಿಗಳನ್ನು ರದ್ದು ಮಾಡಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ನೇಮಿಸಿದ್ದ ಹಲವು ಪ್ರಮುಖ ಹುದ್ದೆಗಳ ನೇಮಕಾತಿಯನ್ನು ಸಿಎಂ ಬಿಎಸ್ ಯಡಿಯೂರಪ್ಪ ರದ್ದು ಮಾಡಿದ್ದು, ಪ್ರಮುಖವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯ ವಿವಿಧ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳ ಸದಸ್ಯತ್ವವನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಾದ್ಯಂತ ಸಾವಿರಾರು ಎಪಿಎಂಪಿಗಳಿಗೆ ಇತ್ತೀಚಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳನ್ನು ಮೈತ್ರಿ ಸರ್ಕಾರ ನೇಮಕಗೊಳಿಸಿ ಆದೇಶಿಸಿತ್ತು. ಆದರೆ ದಿಢೀರ್ ರಾಜ್ಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ನೇಮಕಗೊಳಿಸಿದ್ದ ವಿವಿಧ ಸಮಿತಿಗಳ ಪದಾಧಿಕಾರಿಗಳಿಗೆ ಕೋಕ್ ನೀಡಿದೆ. ಆ ಮೂಲಕ ದೋಸ್ತಿ ನಾಯಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಶಾಕ್ ನೀಡಿದ್ದಾರೆ.