
ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಮತ್ತು ತಾಲೂಕು ಪಂಚಾಯತ್ ಪರವಾಗಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ, ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಡೆಂಗ್ಯೂ ಜ್ವರ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಗಿರೀಶ್ ಹಿರಿಯ ಆರೋಗ್ಯ ಅಧಿಕಾರಿ, ತಾಲೂಕು ಅರೋಗ್ಯ ಇಲಾಖೆ ಸಂಚಾಲಕ ಅಜಯ್, ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಅಧಿಕಾರಿ ಗಂಗಾಧರ್ ಹಾಗೂ ಸುಮನಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.










