
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಪ್ರವಾಹ ಕುರಿತು ಪತ್ರಿಕಾ ಗೋಷ್ಠಿ ನಡೆಯಿತು. ಈ ವೇಳೆ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ದ.ಕ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ನಡೆಯಿತು. ಸರಕಾರ ನಿಮ್ಮ ಜೊತೆ ಇದೆಯೆಂದು ತಿಳಿಸಿದ ನಳೀನ್ ಕುಮಾರ್ ಭರವಸೆ ನೀಡಿದರು. ಮುಖ್ಯಮಂತ್ರಿಯ ಸೂಚನೆಯಂತೆ ಪ್ರಕೃತಿ ವಿಕೋಪದ ಪರೀಶಿಲನೆ ಮಾಡಿ ಪರಿಹಾರ ನೀಡುವುದಾಗಿ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.


















