Monday, September 7, 2026
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಆ. 30ರಂದು ವಿವಿ ಮಟ್ಟದ ‘ನಾದಲೋಕ’ ಸಂಗೀತ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮ ಪಾಲನಾ ನಿರ್ದೇಶನಾಲಯದ ಸಹಯೋಗದಲ್ಲಿ ಆ. 30, 31ರಂದು ಎರಡು ದಿನಗಳ ವಿಶ್ವವಿದ್ಯಾನಿಲಯ ಮಟ್ಟದ ‘ನಾದಲೋಕ’ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ವಿವೇಕಾನಂದ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ.ಎಸ್. ಎಡಪಡಿತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ ಪೈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು

ಆ.31ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ.ಟಿ.ಜಯರಾಮ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕ್ಷೇಮಪಾಲನ ಅಧಿಕಾರಿ ಡಾ. ಬಿ. ಉದಯ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿರುವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು