Monday, April 27, 2026
ಸುದ್ದಿ

ಕಡಬದಲ್ಲಿ ಸೊಂಟ ನೋವಿನಿಂದ ಬಳಲುತ್ತಿದ್ದ ವ್ಯಕಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಕಡಬ: ಸೊಂಟ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕು ಬಿಳಿನೆಲೆಯಲ್ಲಿ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಿಳಿನೆಲೆ ಗ್ರಾಮದ ಅರಿಗೇಣಿ ನಿವಾಸಿ ರವೀಂದ್ರ ಯಾನೆ ರೋಹಿತಾಶ್ವ (38) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಸೊಂಟ ನೋವಿನಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ.
ಇವರು ಶುಕ್ರವಾರ ಸಾಯಂಕಾಲ ಮನನೊಂದು ತನ್ನ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರವೊಂದಕ್ಕೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಗಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.