Wednesday, May 6, 2026
ರಾಜಕೀಯ

ಉತ್ತರ ಕರ್ನಾಟಕ ಜನರ ಮಹಾತ್ವಾಕಾಂಕ್ಷೆಗೆ ಮತ್ತೆ ರೆಕ್ಕೆ; ಮಹದಾಯಿ ಚರ್ಚೆಗೆ ಮುಂಬಯಿಗೆ ಹೊರಟ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮಹದಾಯಿ ನೀರಾವರಿ ಯೋಜನೆ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂಬಯಿಗೆ ಹೊರಟಿದ್ದಾರೆ. ನೆರೆಯ ರಾಜ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಹ್ವಾನದ ಮೇರೆ ಮುಂಬಯಿಗೆ ಹೋಗುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿದರು.

ಮುಂಬಯಿಗೆ ಹೊರಡುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹದಾಯಿಯ ಜೊತೆ ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆಯೂ ಫಡ್ನವಿಸ್ ಜತೆ ಮಾತುಕತೆ ನಡೆಸುತ್ತೇವೆ. ಈ ಬಗ್ಗೆ ಪ್ರಧಾನಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸೆಪ್ಟೆಂಬರ್ 6ರಂದು ಸಚಿವ ಸಂಪುಟ ಸಭೆಯಿದೆ. ಕೆಲವು ಮಹತ್ವದ ನಿರ್ಣಯಗಳನ್ನು ಇದರಲ್ಲಿ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. “ಸೆಪ್ಟೆಂಬರ್ 7 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಪ್ರವಾಹದಿಂದ ಆಗಿರುವ ಅನಾಹುತಗಳ ಬಗ್ಗೆ ಮತ್ತೊಮ್ಮೆ ಸಂಪೂರ್ಣ ಮಾಹಿತಿ ನೀಡಲಾಗುವುದು,” ಎಂದು ಅವರು ಮಾಹಿತಿ ನೀಡಿದರು.

ಪ್ರಧಾನ ಮಂತ್ರಿಗಳಿಗೆ ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲಾಗುವುದು. ಕೇಂದ್ರದಿಂದ ಹೆಚ್ಚಿನ ಪರಿಹಾರ ಘೋಷಿಸಲು ಮನವಿ ಮಾಡುತ್ತೇವೆ. ರಾಜ್ಯಕ್ಕೆ ಹೆಚ್ಚಿನ ನೆರವು ದೊರೆಯುವ ವಿಶ್ವಾಸವಿದೆ ಎಂದರು.

ಯಡಿಯೂರಪ್ಪ ಜತೆ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೂ ಮುಂಬಯಿಗೆ ತೆರಳಿದರು.