Recent Posts

Saturday, April 25, 2026
ಸುದ್ದಿ

ಹೈದಾರಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ – ಕಹಳೆ ನ್ಯೊಸ್

ಕರ್ನಾಟಕದ ಈಶಾನ್ಯ ಭಾಗದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ವೆಂದು ಮರು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಎಂದು ಕಾನೂನು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಹೊರಹೊಮ್ಮಿದೆ. ಅದರಂತೆ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ ಎಂದು ಹೆಸರಿಸಲಾಗುತ್ತದೆ. ಈ ಆರು ಜಿಲ್ಲೆಗಳಲ್ಲಿ ಒಟ್ಟು 41 ವಿಧಾನಸಭೆ ಕ್ಷೇತ್ರಗಳಿದ್ದು,ಸುಮಾರು 1.3 ಕೋಟಿ ಜನಸಂಖ್ಯೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು