Recent Posts

Sunday, April 26, 2026
ಸುದ್ದಿ

ಸಂತ್ರಸ್ಥರ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದ ಬೆಳ್ತಂಗಡಿ ಪೊಲೀಸರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ತೀವ್ರ ಮಟ್ಟದ ನೆರೆ ಉಂಟಾದಾಗ ನೆರೆ ಸಂತ್ರಸ್ಥರ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದ ಬೆಳ್ತಂಗಡಿ ವೃತ್ತ ವ್ಯಾಪ್ತಿಯ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿ.ಎಸ್.ಐ ರವಿ.ಬಿ.ಎಸ್ ಮತ್ತು ಸಿಬ್ಬಂದಿಗಳಿಗೆ, ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅವಿನಾಶ್ ಮತ್ತು ಸಿಬ್ಬಂದಿಗಳಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಜೆ. ಅರುಣ್ ಚಕ್ರವರ್ತಿ ಐ.ಪಿ.ಎಸ್, ರವರು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲೆಯ ಇತರೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು