Monday, March 16, 2026
ಸುದ್ದಿ

ಪುತ್ತೂರಿನಲ್ಲಿ ವೇಶ್ಯವಾಟಿಕೆ ಅಡ್ಡದ ಮೇಲೆ ದಾಳಿ; ಮೂವರ ಬಂಧನ – ಕಹಳೆ ನ್ಯೂಸ್

ಪುತ್ತೂರು: ನಿನ್ನೆ ಸುಮಾರು 12.30 ಗಂಟೆಗೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಬಳ್ಳಿಕಾನ ಎಂಬಲ್ಲಿ, ನಾರಾಯಣ ನಾಯ್ಕ ಎಂಬವರ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ವೃತ್ತದ ವೃತ್ತ ನಿರೀಕ್ಷಕ ಮತ್ತು ಸಿಬ್ಬಂದಿಗಳೊಂದಿಗೆ ಮನೆಗೆ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭ ಸುಳ್ಯ ಸಂಪಾಜೆ ಗ್ರಾಮದ ನಿವಾಸಿ ಚರಣ್ (25 ವರ್ಷ) ಪುತ್ತೂರು ಕೆಮ್ಮಿಂಜೆ ಗ್ರಾಮದ ನಿವಾಸಿ ಅರುಣ್ ಕುಮಾರ್ (38 ವರ್ಷ) ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಸುಳ್ಯ ಮೂಲದ ಮಹಿಳೆಯೊಬ್ಬಳನ್ನು, ಹಣದ ಆಮಿಷ ತೋರಿಸಿ ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗೂ ಮನೆಯಲ್ಲಿ ವೇಶ್ಯಾವಾಟಿಕೆ ಅನುಮತಿ ನೀಡಿದ ಮೇರೆಗೆ ನಾರಾಯಣ ನಾಯ್ಕ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 3, 4, 5(ಡಿ) ಐಟಿಪಿ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ. ನೊಂದ ಮಹಿಳೆಯನ್ನು, ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.

ಜಾಹೀರಾತು
ಜಾಹೀರಾತು