
ಮಂಗಳೂರು: ರೈಲ್ವೇ ಅಧಿಕಾರಿಗಳ ಸಭೆಯು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಇಂದು ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮೈಸೂರು ಪಾಲಕ್ಕಾಡ್ ಹಾಗೂ ಕೊಂಕಣ್ ರೈಲ್ವೇ ವಿಭಾಗದ ಹಿರಿಯ ಅಧಿಕಾರಿಗಳು, ದ.ಕ ಜಿಲ್ಲಾಧಿಕಾರಿ, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಕುಂದು ಕೂರತೆಗಳ ಬಗ್ಗೆ ಚರ್ಚೆ ನಡೆಯಿತು.











