Sunday, June 21, 2026
ಸುದ್ದಿ

ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪರಿಂದ ಸಿಹಿಸುದ್ದಿ -ಕಹಳೆ ನ್ಯೂಸ್

ಚಿತ್ರದುರ್ಗ : ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದಾರೆ. ರೈತರ ಸಾಲಮನ್ನಾ ವಿಚಾರದಲ್ಲಿ ಹಿಂದಿನ ಸರ್ಕಾರದ ಕ್ರಮವನ್ನು ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು

ಚಿತ್ರದುರ್ಗ ತಾಲೂಕಿನ ಸಿರಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ರೈತರ ಸಾಲಮನ್ನಾವನ್ನು ಹಿಂದಿನ ಸರ್ಕಾರ ಮಾಡಿರುವ ಕ್ರಮವನ್ನು ಹಂತ ಹಂತವಾಗಿ ಸಾಲಮನ್ನಾ ಮಾಡುವ ಕಡೆ ಗಮನ ಕೊಡುತ್ತೇವೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಮುಖ್ಯಮಂತ್ರಿ ಆದಗೆಲ್ಲ ಒಂದು ರೀತಿಯ ಅಗ್ನಿ ಪರೀಕ್ಷೆ ಎದುರಾಗುತ್ತದೆ. ವಿಪರೀತ ಮಳೆಯಿಂದ ಬಹಳ ದೊಡ್ಡ ಪ್ರಮಾಣದಲ್ಲಿ ನೆರೆ ಹಾವಳಿಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಆ ಸಮಸ್ಯೆಗಳನ್ನು ಬಗೆ ಹರಿಸಿ ಮನೆ ಕಟ್ಟಿಸಿಕೊಡಬೇಕಾಗಿದೆ. ಕೆಲವು ಜಿಲ್ಲೆಗಳಲ್ಲಿ ಬರಗಾಲವಿದ್ದು, ಅದನ್ನು ಎದುರಿಸಬೇಕಾಗಿದೆ. ಕೇಂದ್ರದಿಂದ ನಾಲ್ಕೈದು ದಿನಗಳಲ್ಲಿ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.