Recent Posts

Saturday, May 9, 2026
ಸುದ್ದಿ

Breaking News : ಸುಳ್ಯದ ಅಡ್ಕಾರಿನಲ್ಲಿ ಭೀಕರ ರಸ್ತೆ ಅಪಘಾತ ; ಮೂವರ ದುರ್ಮರಣ – ಮೂವರ ಸ್ಥಿತಿ ಚಿಂತಾಜನಕ – ಕಹಳೆ ನ್ಯೂಸ್

ಸುಳ್ಯ : ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎ-22-ಎನ್-7974 ಸಂಖ್ಯೆಯ ಇನ್ನೋವಾ ಕಾರು ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕೆಎಲ್-15-ಎ- 1747 ಸಂಖ್ಯೆಯ ಕೇರಳ ಸರ್ಕಾರಿ ಸಾರಿಗೆ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 06 ಪ್ರಯಾಣಿಕರ ಪೈಕಿ ಪುತ್ತೂರು ಕೆಮ್ಮಿಂಜೆ ನಿವಾಸಿಗಳಾದ 1.ಮಹಮ್ಮದ್ ಸಾಧಿಕ್(31) 2.ಮಜೀದ್ ಎಂ (33) ಹಾಗೂ 3.ಸುನೈನಾ (16) ಎಂಬವರುಗಳಿಗೆ ತೀವೃ ರಕ್ತಗಾಯವಾಗಿದ್ದು ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮೃತಪಟ್ಟಿರುತ್ತಾರೆ ಹಾಗೂ ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಸುಳ್ಯ ಕೆ.ವಿ.ಜಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಪುತ್ತೂರು ಕೆಮ್ಮಿಂಜೆ ನಿವಾಸಿ ಮಹಮ್ಮದ್ ಆಲಿ ಎಂಬವರು ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ 279,337,304(ಎ) ಐ.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.