
ನವದೆಹಲಿ: ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್‍ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್, ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳಿಗೆ ವಿಸ್ತರಣೆಗೆ ಆದೇಶ ನೀಡಿದ್ದಾರೆ. ಹೀಗಾಗಿ, ಅಕ್ಟೋಬರ್ 25ರವರೆಗೆ ಡಿಕೆಶಿಗೆ ನ್ಯಾಯಾಂಗ ಬಂಧನ ಫಿಕ್ಸ್ ಆಗಿದೆ.

ಇನ್ನೊಂದೆಡೆ ಅವರಿಗೆ ಜಾಮೀನು ಕೋರಿ ನವದೆಹಲಿಯ ಹೈ ಕೋರ್ಟ್‍ನಲ್ಲೂ ವಿಚಾರಣೆ ನಡೆಯುತ್ತಿದ್ದು, ಇಂದು ಡಿಕೆಎಸ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.















