Friday, March 20, 2026
ರಾಜಕೀಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರು ನಾಳೆ ಮಹಾರಾಷ್ಟ್ರಕ್ಕೆ ಹೊರಡಲಿದ್ದಾರೆ. ಬುಧವಾರ ಅವರು ಸಾಂಗ್ಲಿ, ಸೋಲಾಪುರ, ಅಕ್ಕೋಲಕೊಟ್, ಚಾಕೂರು, ಲಾತೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.


ಗುರುವಾರ ಕಲಬುರಗಿಯ ಗಂಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ರಾಜ್ಯ ರಾಜಧಾನಿಗೆ ಹಿಂದಿರುಗಲಿದ್ದಾರೆ.
ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮತ್ತು ಲಿಂಗಯತರನ್ನು ಸೆಳೆಯಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು