Recent Posts

Saturday, May 9, 2026
ಸುದ್ದಿ

ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡ ಅನರ್ಹರಿಗೆ ಮತ್ತೊಂದು ಅವಕಾಶ -ಕಹಳೆ ನ್ಯೂಸ್

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡ ಅನರ್ಹರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಬಿಪಿಎಲ್ ಪಡಿತರ ಚೀಟಿ ಪಡೆದ ಶ್ರೀಮಂತರು ಸುಳ್ಳು ಮಾಹಿತಿಯೊಂದಿಗೆ ಸರ್ಕಾರಕ್ಕೆ ವಂಚಿಸಿರುವುದು ಕಂಡು ಬಂದಿದೆ. ಹೀಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಸೆಪ್ಟೆಂಬರ್ 30ರ ವರೆಗೆ ಕಾರ್ಡ್ ಹಿಂತಿಗಿಸಲು ಗಡುವು ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಅನರ್ಹರು ಪಡೆದುಕೊಂಡ ಬಿಪಿಎಲ್ ಕಾರ್ಡ್‍ಗಳನ್ನು ಸಂಬಂಧಿಸಿದ ಕಚೇರಿಗೆ ಹಿಂತಿರುಗಿಸಬೇಕು. ಇಲ್ಲವಾದ್ದಲ್ಲಿ ಅಂತಹ ಕುಟುಂಬದವರನ್ನು ಪತ್ತೆಹಚ್ಚಿ ನಿಯಮಾನುಸಾರ ಕ್ರಿಮಿನಲ್ ಕೇಸು ದಾಖಲಿಸಲಾಗುತ್ತದೆ. ಮತ್ತು ಮುಕ್ತ ಮಾರುಕಟ್ಟೆ ದರದಲ್ಲಿ ಪಡಿತರ ಸಾಮಗ್ರಿ ದರ ಆಧರಿಸಿ ದಂಡ ವಸೂಲಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿz