Recent Posts

Sunday, September 13, 2026
ಸುದ್ದಿ

ಸ್ನೇಹಿತನೊಂದಿಗೆ ಬರ್ತಡೇ ಪಾರ್ಟಿ ಮಾಡಲೋದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಕಹಳೆ ನ್ಯೂಸ್

ಸ್ನೇಹಿತನೊಂದಿಗೆ ಬರ್ತಡೇ ಪಾರ್ಟಿ ಮಾಡಲೋದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಕೊಯಮತ್ತೂರು: ತನ್ನ ಸ್ನೇಹಿತನೊಂದಿಗೆ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯುವತಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಜಾಹೀರಾತು

ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

11ನೇ ತರಗತಿಯ ವಿದ್ಯಾರ್ಥಿನಿ ಮಂಗಳವಾರ ತನ್ನ ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ಹೋಗಿದ್ದಳು. ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುವ ವೇಳೆ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಘಟನೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯು ನಡೆದ ವಿಚಾರವನ್ನು ಮರುದಿನ ತನ್ನ ತಾಯಿಯ ಬಳಿ ತಿಳಿಸಿದ್ದಾಳೆ. ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.