Recent Posts

Sunday, September 13, 2026
ಸುದ್ದಿ

ಕಡಬ : ಜೀಪ್ – ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ; 7 ಮಂದಿಗೆ ಗಾಯ – ಕಹಳೆ ನ್ಯೂಸ್

ಕಡಬ : ಜೀಪ್ – ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ; 7 ಮಂದಿಗೆ ಗಾಯ

ಕಡಬ: ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ.

ಜಾಹೀರಾತು

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.