Thursday, May 14, 2026
ಸುದ್ದಿ

ಭಾರತ -ವಿಂಡೀಸ್ 2ನೇ ಏಕದಿನ ಸರಣಿ : ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್-ಕಹಳೆ ನ್ಯೂಸ್

ವಿಶಾಖಪಟ್ಟಣಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ 0-1 ಅಂತರದ ಹಿನ್ನಡೆ ಅನುಭವಿಸಿರುವ ಭಾರತಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-1ರಿಂದ ಹಿನ್ನಡೆ ಅನುಭವಿಸಿರುವ ಭಾರತ ಸರಣಿಯನ್ನು ಜೀವಂತವಾಗಿರಿಸಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ವಿಂಡೀಸ್ ತಂಡ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿ 2ನೇ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಅಂತೆಯೇ ಭಾರತ ತಂಡ ಕೂಡ 2ನೇ ಪಂದ್ಯವನ್ನು ಗೆದ್ದು ಸರಣಿ ಸಮಬಲ ಮಾಡಿಕೊಳ್ಳಲು ಹೋರಾಟ ನಡೆಸಲಿದೆ. ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.